ಭೂಮಿಯ ಆಯುಷ್ಯ ಕೇವಲ ಹನ್ನೆರಡು ವರ್ಷ: ಖ್ಯಾತ ಪರಿಸರ ತಜ್ಞ ನಾಗೇಶ್
ಬೆಂಗಳೂರು: ಪರಸರದ ದುಸ್ಥಿತಿ ಇದೇ ರೀತಿ ಮುಂದುವರಿದರೆ ಇನ್ನು ಹನ್ನೆರಡು ವರ್ಷದಲ್ಲಿ ಭೂಮಿಯಲ್ಲಿ ಮನುಷ್ಯರು ಬದುಕದಂತಹ ಸ್ಥಿತಿ ನಿರ್ಮಾಣವಾಗಲಿದೆ. ಹಾಗಾಗದಿರಲು ಈಗಿನಿಂದಲೇ ಜಾಗೃತರಾಗಿ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಕರ್ನಾಟಕ ಹಮ್ಮಿಕೊಂಡ ಪರಿಸರ ಸಂರಕ್ಷಣಾ ಕಾರ್ಯಗಾರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಕರೆ ನೀಡಿದರು.
ಪರಿಸರ ದಿನದಿಂದ ದಿನಕ್ಕೆ ಮನುಷ್ಯನ ಸ್ವಾರ್ಥಕ್ಕೊಳಗಾಗಿ ದುಸ್ಥಿತಿಗೆ ತಲುಪಿತಿದೆ. ಇದರ ವಿರುದ್ಧ ಯುವ ಜನಾಂಗ ಜಾಗೃತರಾಗಬೇಕು. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ವೈಯಕ್ತಿಕ ನೆಲೆಗಟ್ಟಿನಲ್ಲಿ ನಮ್ಮನ್ನು ನಾವು ಬದಲಾಯಿಸಿ ಸಮಾಜದಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಹೇಳಿದರು.
ನಾಗರಿಕರು ಜಾಗೃತರಾಗಿ ಸರಕಾರದ ಮೇಲೆ ಒತ್ತಡ ಹೇರಿ ಪರಿಸರಕ್ಕೆ ಪೂರಕವಾದ ನಿಯಮಗಳನ್ನು, ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಬೇಕು. ಸರಕಾರ ಮತ್ತು ಜನತೆ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆಂದು ಹೇಳಿದರು. ವಿದ್ಯಾರ್ಥಿಗಳು ಪರಿಸರವನ್ನು ಪ್ರೀತಿಸಲು ಆರಂಭಿಸಬೇಕು. ಪರಿಸರ ಸಂರಕ್ಷಣೆಯ ಜಾಗೃತಿ ಕಾರ್ಯವನ್ನು ಮನೆಯಿಂದಲೇ ಆರಂಭಿಸಬೇಕು ಎಂದು ಹೇಳಿದರು.
ಕಾರ್ಯಗಾರದಲ್ಲಿ ಎಸ್.ಐ.ಓ ವತಿಯಿಂದ ಪರಿಸರ ಸಂರಕ್ಷಣಾ ಸಂಬಂಧಿತ ಮಾರ್ಗದರ್ಶಿ ಸೂತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಐ.ಓ ರಾಜ್ಯಾಧ್ಯಕ್ಷರಾದ ನಿಹಾಲ್ ಕಿದಿಯೂರು, ರಿಯಾಜ್ ಪಟೇಲ್, ರಾಜ್ಯ ಕಾರ್ಯದರ್ಶಿ ಯಾಸೀನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.