ಬೊಲೆರೋ-ಲಾರಿ ನಡುವೆ ಮುಖಾಮುಖಿ ಢಿಕ್ಕಿ; ಮೂವರು ಸಾವು

ಮಂಗಳೂರು: ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.

ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.

ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಥಾಮ್ಸನ್ ಹಾಗೂ ಸೈರತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!