ಸೆಕ್ಷನ್ 144 ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಹರಡುವುದನ್ನು ತಡೆಯಲು ಈಗಾಗಲೇ ನಾಗರೀಕರ
ಸಂಚಾರ ನಿರ್ಭಂದಿಸಿ ಸಿ.ಅರ್.ಪಿ.ಸಿ ಸೆಕ್ಷನ್ 144 (3 ) ರಲ್ಲಿ ಆದೇಶ ಹೊರಡಿಸಿದೆ ಅಲ್ಲದೇ ಇತರೇ ನಿರ್ದೇಶನಗಳನ್ನು ಹೊರಡಿಸಲಾಗಿದೆ.
ಆದರೆ ಜಿಲ್ಲೆಯ ನಾಗರೀಕರು ಈ ಆದೇಶಗಳನ್ನು ಉಲ್ಲಂಘನೆ ಮಾಡುತ್ತಿರುವುದು ವರದಿಯಾಗುತ್ತಿದ್ದು, ಇಂತಹ ಪ್ರಕರಣಗಳನ್ನು ನಿಯಂತ್ರ್ರಿಸುವ ಅವಶ್ಯಕತೆಯಿರುವುದರಿಂದ, ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆಯಿದ್ದು,
ಸಿ.ಆರ್.ಪಿ.ಸಿ ಆದೇಶ ಮತ್ತು ಕೋವಿಡ್ ರೋಗವನ್ನು ನಿಯಂತ್ರಿಸಲು ಹೊರಡಿಸಲಾಗಿರುವ ಇತರೇ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ, ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಅಧಿಕಾರವನ್ನು ,
ಕುಂದಾಪುರ ಉಪವಿಭಾಗಾಧಿಕಾರಿಗಳು, ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ , ಕಾರ್ಕಳ, ಬೈಂದೂರು, ಹೆಬ್ರಿ ತಹಸೀಲ್ದಾರ್ ಗಳಿಗೆ , ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.