2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು:  2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ  ಪ್ರಕಟಿಸಿದೆ.

ಮಾರ್ಚ್ 27ರಿಂದ ಏಪ್ರಿಲ್ 9ರ ತನಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ನಡೆಯಲಿದ್ದು, ಈ ಸಂಬಂಧ ಅಧಿಕೃತ ವೇಳಾಪಟ್ಟಿಯನ್ನು ಮಂಡಳಿ ತನ್ನ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.

ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30/45ರವೆಗೆ ಮತ್ತು ಕೆಲವು ಪರೀಕ್ಷೆಗಳು ಮಧ್ಯಾಹ್ನ 2 ರಿಂದ 5.15 ರವರೆಗೆ ನಡೆಯಲಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ 

ಮಾರ್ಚ್​ 27– ಪ್ರಥಮ ಭಾಷೆ

ಮಾರ್ಚ್  30 –  (ಕೋರ್ ಸಬ್ಜೆಕ್ಟ್​) ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ

ಏಪ್ರಿಲ್ 01 – ದ್ವಿತೀಯ ಭಾಷೆ

ಏಪ್ರಿಲ್ 03- ತೃತೀಯ ಭಾಷೆ  ಎನ್​ಎಸ್​ಕ್ಯೂಎಫ್​ ಪರೀಕ್ಷಾ ವಿಷಯಗಳು

ಏಪ್ರಿಲ್ 04  ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್​-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್​ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಏಪ್ರಿಲ್ 07-  ಗಣಿತ, ಸಮಾಜಶಾಸ್ತ್ರ


ಏಪ್ರಿಲ್ 09-  ಸಮಾಜ ವಿಜ್ಞಾನ

Leave a Reply

Your email address will not be published. Required fields are marked *

error: Content is protected !!