ರಾಜ್ಯದಲ್ಲಿ ಮೊದಲ ಕೊರೋನಾ ವೈರಸ್ ಪ್ರಕರಣ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಮೊದಲ ಕೊರೊನಾ ಪ್ರಕರಣ ಅಧಿಕೃತವಾಗಿ ಪ್ರಕಟವಾಗಿದೆ. ಅಮೆರಿಕದಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಮಾರ್ಚ್ 1 ರಂದು ಅಮೆರಿಕದಿಂದ ಆಗಮಿಸಿದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಫಲಿತಾಂಶ ಬಂದಿದೆ ಎಂದು ತಿಳಿಸಿದೆ.
ಇಲ್ಲಿಯವರೆಗೆ 982 ಮಂದಿ ಮೇಲೆ ನಿಗಾ ಇರಿಸಲಾಗಿದೆ. ಈ ಪೈಕಿ ಕಳೆ 28 ದಿನಗಳಿಂದ 266 ಮಂದಿ ಮೇಲೆ ನಿಗಾ ಇಟ್ಟಿದ್ದರೆ 700 ಮಂದಿ ಮನೆಯಲ್ಲೇ ಪ್ರತ್ಯೇಕವಾಗಿ ನಿಗಾ ಇರಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 91,911 ಮಂದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಪರೀಕ್ಷೆ ಮಾಡಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 61,585 ಮಂದಿ, ಮಂಗಳೂರಿನಲ್ಲಿ 25,003 ಮಂದಿಯನ್ನು ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕಾರವಾರ ಮತ್ತು ಮಂಗಳೂರು ಬಂದರಿನಲ್ಲಿ ಒಟ್ಟು 5,323 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ ಎಂದು ತಿಳಿಸಿದೆ.