ಕಾಂಗ್ರೆಸ್ ಮಾಜಿ ಶಾಸಕ ಗೋಪಾಲ ಭಂಡಾರಿ ನಿಧನ : ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ, ಜುಲೈ ೫ : ಸರಳ ಸಜ್ಜನಿಕೆಯ ರಾಜಕಾರಣಿ, ಹಿರಿಯ ಕಾಂಗ್ರೆಸ್ ಮುಖಂಡ, ಬಡವರೊಂದಿಗೆ ಗುರುತಿಸಿಕೊಂಡಿದ್ದ, ಕಾರ್ಕಳದಲ್ಲಿ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಗೋಪಾಲ ಭಂಡಾರಿ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ತಮ್ಮ ತೀವೃ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಕಾರ್ಕಳದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ತಮ್ಮ ಅಂತಿಮ ನಮನಗಳನ್ನು ಸಲ್ಲಿಸಿದರು. ಮಟ್ಟಾರ್ ಅವರೊಂದಿಗೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶ್ರೀಶ ನಾಯಕ್, ನಗರಸಭಾ ಸದಸ್ಯ ಗಿರೀಶ್ ಎಂ. ಅಂಚನ್, ದಿನೇಶ ಅಮೀನ್, ದಿನಕರ ಪೂಜಾರಿ ಮತ್ತು ಗುರುಪ್ರಸಾದ್ ಶೆಟ್ಟ ಕಟಪಾಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!