ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ

ನವದೆಹಲಿ: ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ. ಹಂಸರಾಜ್ ಭಾರದ್ವಾಜ್ (82) ಅವರು ಕೇಂದ್ರ ಕಾನೂನು ಸಚಿವರಾಗಿ ಕೆಲಸ ಮಾಡಿದ್ದರು. ಇನ್ನು 2009ರಿಂದ 14ರ ಅವಧಿಗೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು. 

ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಹಂಸರಾಜ್ ಭಾರದ್ವಾಜ್ ನಿಧನಕ್ಕೆ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಂತಾಪ ಸೂಚಿಸಿದ್ದಾರೆ. ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್, ಮನಮೋಹನ್ ಸಿಂಗ್ ಅವಧಿಯಿಂದಲೂ ನಾನು ಅವರನ್ನು ಬಲ್ಲೆ. ಅವರು ವಿನಯಶೀಲ, ಸ್ಪಷ್ಟ ಮತ್ತು ಜ್ಞಾನವುಳ್ಳ ವ್ಯಕ್ತಿಯಾಗಿದ್ದರು ಎಂದು ಬಣ್ಣಿಸಿದ್ದಾರೆ.

ಹಂಸರಾಜ್ ಭಾರದ್ವಾಜ್ ಅವರ ಅವಧಿಯಲ್ಲಿ 4 ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದರು. ಸಿಎಂ ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ದಾಖಲಿಸಲು ಅನುಮತಿ ನೀಡಿ. ಸರ್ಕಾರವನ್ನು ಅಮಾನತಿನಲ್ಲಿಟ್ಟಿದ್ದು ಭಾರೀ ಸುದ್ದಿಯಾಗಿತ್ತು. 

ನವದೆಹಲಿಯ ನಿಗಮ್ ಬೋದ್ ಘಾಟ್ ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ. 

Leave a Reply

Your email address will not be published. Required fields are marked *

error: Content is protected !!