ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನ
ಬೆಂಗಳೂರು: ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮೇ.15 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆಂದು ಹೇಳಲಾಗುತ್ತಿದೆ.
ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಮುತ್ತಪ್ಪ ರೈ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದರಂತೆ ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕಾರ್ಯಪ್ರವೃತ್ತರಾಗಿದ್ದರು.
ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ಮುತ್ತಪ್ಪ ರೈ ಅವರು ಬೆಂಗಳೂರಿನ ಬಿಡದಿಯಲ್ಲಿ ಜೀವನ ನಡೆಸುತ್ತಿದ್ದರು .ಜಯಕರ್ನಾಟಕ ಸಂಘಟನೆಯ ಮೂಲಕ ಕರುನಾಡಿನಲ್ಲಿ ಕನ್ನಡಿಗರಿಗೆ ನೆರವಾಗಿದ್ದರು. ಪುತ್ತೂರಿನಲ್ಲಿ ನಡೆಯುವ ಕಂಬಳದ ನೇತೃತ್ವ ವಹಿಸಿಕೊಳ್ಳುತ್ತಿದ್ದ ಅವರು ಆಸು ಪಾಸಿನ ಜನರ ಮನ ಗೆದ್ದಿದ್ದರು. ಕುಕ್ಕೆ ಕ್ಷೇತ್ರಕ್ಕೆ ಬ್ರಹ್ಮ ರಥ ನೀಡುವ ಮೂಲಕ ಕ್ಷೇತ್ರದ ಭಕ್ತರಿಂದಲೂ ಗೌರವಕ್ಕೆ ಪಾತ್ರರಾಗಿದ್ದರು.
Every person who had done wrong to society and after realising his wrong doings at ones for the same and reforms for the good of the society, should be pardoned.
May his soul rest in peace.