ಉಚಿತ ಸಾಮೂಹಿಕ ವಿವಾಹ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಂಗಳೂರು – ವಿಧಾನಸೌಧದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದ ಬಡ ಜನರಿಗೆ ನಡೆಯುವ ಉಚಿತ ವಿವಾಹದ ಯೋಜನೆ ಇದಾಗಿದೆ. ಈ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದರು.
ಮುಜರಾಯಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಈ ಯೋಜನೆ ಜಾರಿಗೆ ತಂದಿದ್ದು ಇದರ ಸಂಪೂರ್ಣ ಮುತುವರ್ಜಿಯನ್ನು ಸಚಿವರು ವಹಿಸಲಿದ್ದಾರೆ. ಸಭೆಯಲ್ಲಿ ವಿವಿಧ ಶಾಸಕರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಏಪ್ರಿಲ್ 26 ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ವಿವಿಧ ಎ ದರ್ಜೆಯ ದೇವಾಲಯಗಳಲ್ಲಿ ಉಚಿತ ಸಾಮೂಹಿಕ ಮದುವೆ ನಡೆಯಲಿದೆ. ತಾಳಿ ಸಹಿತ ಚಿನ್ನಗಳು ಮತ್ತು ವಧುವಿಗೆ ಹತ್ತು ಸಾವಿರ ಹಾಗೂ ವರನಿಗೆ ಐದು ಸಾವಿರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರ್ಕಾರದ ವತಿಯಿಂದಲೇ ನೀಡಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರು.