ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್:6 ಕೋಟಿ ರೂ.ವೆಚ್ಚದ ಆಸ್ಪತ್ರೆ ಹಸ್ತಾಂತರ
ಕುಂದಾಪುರ: ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ, ಉಡುಪಿ ಅಂಬಲಪಾಡಿಯ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಅಂದಾಜು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 150 ಹಾಸಿಗೆಗಳ ದಿ.ಲಕ್ಷ್ಮೀ ಸೋಮ ಬಂಗೇರ ನೂತನ ಹೆರಿಗೆ ಆಸ್ಪತ್ರೆಯ ಹಸ್ತಾಂತರ ಕಾರ್ಯಕ್ರಮವನ್ನು ಆರೋಗ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಉದ್ಘಾಟಿಸಿದರು .
ಸರ್ಕಾರಿ ಆಸ್ಪತ್ರೆಯ ಅಗತ್ಯ ಬೇಡಿಕೆ ಈಡೇರಿಸುವ ಜತೆಗೆ ರಾಜ್ಯದ ಮಾದರಿ ಸರ್ಕಾರಿ ಆಸ್ಪತ್ರೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಇಲಾಖೆಯಿಂದ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ನೇಮಕಾತಿಗಾಗಿ ಈ ಹಿಂದೆ ಇದ್ದ ಪದ್ಧತಿ ಬದಲಾಯಿ
ಸಲಾಗುತ್ತದೆ ಎಂದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. . ಆರೋಗ್ಯ ಇಲಾಖೆ ಮೂಲಕವೇ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟದಲ್ಲಿ ಅರ್ಹ ವೈದ್ಯರನ್ನು ಗುರುತಿಸಿ ಜಿಲ್ಲೆ ಹಾಗೂ ರಾಜ್ಯಕ್ಕೆ ಆದ್ಯತೆ ನೆಲೆಯಲ್ಲಿ ಅವರ ಸೇವೆ ಬಳಸಿಕೊಳ್ಳಲಾಗುವುದು. ಎನ್ಆರ್ಎಚ್ಎಂ ಯೋಜನೆ ಆಡಿಯಲ್ಲಿ ಕಾರ್ಯ ನಿರ್ವಹಿಸುವ ಶುಶ್ರೂಷಕಿಯರನ್ನು ಹೊರತು ಪಡಿಸಿ ಕನಿಷ್ಠ ವೇತನ ಪಡೆದುಕೊಳ್ಳುವ ಶುಶ್ರೂಷಕಿಯರ ವೇತನವನ್ನು ₹ 17,500 ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಸೇವೆ ಕಾಯಂ ಮಾಡಬೇಕು ಎನ್ನುವ ಬೇಡಿಕೆ ಇದೆ. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಆರ್ಥಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ನ್ಯಾಯ ಕೊಡಿಸಲಾಗುವುದು. ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ₹ 500 ಹೆಚ್ಚಿಸಲು ಪ್ರಾಸ್ತಾವ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಅವರಿಗೆ ₹ 9,000 ದೊರಕುವಂತೆ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು.
ರೋಗಿಗಳು ಬಂದಾಗ ಖಾಸಗಿ ಆಸ್ಪತ್ರೆ ವೈದ್ಯರಂತೆ ಸರ್ಕಾರಿ ಆಸ್ಪತ್ರೆಯಲ್ಲಿಯೂ ನಗು–ಮುಖದ ಸೇವೆ ನೀಡಬೇಕು. ಸರ್ಕಾರಿ ಹಾಗೂ ಖಾಸಗಿ ಎನ್ನುವ ಎರಡು ದೋಣಿಗಳಲ್ಲಿ ಸಾಗುವ ವೈದ್ಯರ ವಿರುದ್ಧ ದೂರು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೆ ಪ್ರತಿಫಲ ಇಲ್ಲದೆ ಗುಣಮಟ್ಟದ ಸೌಲಭ್ಯ ಗಳುಳ್ಳ ಆಸ್ಪತ್ರೆ ನಿರ್ಮಿಸಿ ಸರ್ಕಾರಕ್ಕೆ ನೀಡುವ ಮೂಲಕ ಡಾ.ಜಿ.ಶಂಕರ ರಾಜ್ಯಕ್ಕೆ ಮಾದರಿ ಆಗಿದ್ದಾರೆ ಎಂದು ಅವರು ಹೇಳಿದರು.
ಶಾಸಕ ಹಾಲಾಡಿ ಶ್ರೀನಿವಾಸ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆರಿಗೆ ಆಸ್ಪತ್ರೆಗಳು ಇಲ್ಲದ ದಿನಗ ಳಲ್ಲಿ ಸಾಯುವವರ ಸಂಖ್ಯೆ ಹೆಚ್ಚಾಗಿತ್ತು. ಈಗ ಸಾಕಷ್ಟು ಆಸ್ಪತ್ರೆ ಇದ್ದು, ಸಾವಿ ನ ಪ್ರಮಾಣದಲ್ಲಿ ಗಣನೀಯ ಇಳಿಕೆ ಯಾಗಿದೆ ಎಂದರು.
ಉಡುಪಿ ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ.ಶಂಕರ್ ಪ್ರಾಸ್ತಾವಿಕ ಮಾತನಾಡಿದರು. ಶಾಲಿನಿ ಜಿ.ಶಂಕರ್ ಹೆರಿಗೆ ವಾರ್ಡ್ನ್ನು ಉದ್ಘಾಟಿಸಿದರು. ಶಾಸಕ ರಘುಪತಿ ಭಟ್, ಬಿ.ಎಂ.ಸುಕುಮಾರ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಅಧ್ಯಕ್ಷೆ ಶ್ಯಾಮಲಾ ಕುಂದರ್, ಉಪವಿಭಾ ಗಾಧಿಕಾರಿ ಕೆ.ರಾಜು ಇದ್ದರು.