ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ – ವೆರೋನಿಕಾ ಕರ್ನೆಲಿಯೊ ಖಂಡನೆ
ಉಡುಪಿ: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ವೆರೋನಿಕಾ ಕರ್ನೆಲಿಯೋ ಖಂಡಿಸಿದ್ದಾರೆ.
ವಿದ್ಯಾರ್ಥಿನಿಯೊಂದಿಗೆ ಆರೋಪಿಗಳು ವರ್ತಿಸಿರುವ ಕೃತ್ಯವು ಅತ್ಯಂತ ಹೇಯವಾಗಿದ್ದು, ಅದರ ವೀಡಿಯೋ ಮಾಡಿ ವಿಡಿಯೋ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಇದರಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅದರ ವೀಡಿಯೋ ಮಾಡಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬೀಡುತ್ತಿರುವ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು ಇದರಿಂದ ಸಮಾಜದಲ್ಲಿ ಮಹಿಳಾ ಸಮುದಾಯಕ್ಕೆ ಬಹುದೊಡ್ಡ ಕಂಟಕವಾಗಿ ಪರಿಣಮಿಸುತ್ತಿದೆ.ಇಂತಹ ಘಟನೆಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪೋಲಿಸ್ ಇಲಾಖೆ ಯಾವುದೇ ಕಾರಣಕ್ಕೂ ಕೂಡ ರಕ್ಷಿಸದೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪೊಲೀಸ್ ಇಲಾಖೆ ಯಾವುದೇ ರೀತಿಯ ಒತ್ತಡಗಳಿಗೂ ಕೂಡ ಮಣಿಯದೆ ಆರೋಪಿಗಳಿಗೆ ಅಜೀವ ಪರ್ಯಂತ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಂತಹ ಘಟನೆಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪೋಲಿಸ್ ಇಲಾಖೆ ಯಾವುದೇ ಕಾರಣಕ್ಕೂ ಕೂಡ ರಕ್ಷಿಸದೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪೊಲೀಸ್ ಇಲಾಖೆ ಯಾವುದೇ ರೀತಿಯ ಒತ್ತಡಗಳಿಗೂ ಕೂಡ ಮಣಿಯದೆ ಆರೋಪಿಗಳಿಗೆ ಅಜೀವ ಪರ್ಯಂತ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
Guilty should not b forgiven at any cause. Such dirty action by students is unexpected. Our future should b safeguarded. We condem such dirty actions.