ಅಪ್ರಾಪ್ತೆಯ ಮೇಲೆ ಗ್ಯಾಂಗ್ರೇಪ್: ಬಾಲಕಿ 6 ತಿಂಗಳ ಗರ್ಭಿಣಿ
ವಿಟ್ಲ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಗ್ಯಾಂಗ್ರೇಪ್ ಪ್ರಕರಣ. 5 ಜನರ ತಂಡ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವಿಟ್ಲದಲ್ಲಿ ಬೆಳಕಿಗೆ ಬಂದಿದೆ.
ಆಕೆ ಗರ್ಭವತಿಯಾಗಿದ್ದು ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ತಂಡದಿಂದ ಕೃತ್ಯ ನಡೆದಿದೆ ಎನ್ನಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ವಿಟ್ಲ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಐವರ ತಂಡ 12 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದರು ಎನ್ನಲಾಗಿದೆ.ಇದರ ಪರಿಣಾಮ ಆಕೆ 6 ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಯಾರಲ್ಲಿಯೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದರು ಎಂದು ತಿಳಿದು ಬಂದಿದೆ.
ಆಶಾ ಕಾರ್ಯಕರ್ತೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.