ಬಾಬರಿ ಮಸೀದಿ ತೀರ್ಪು 9 ತಿಂಗಳೊಳಗೆ ನೀಡಿ – ಸುಪ್ರೀಂ ಕೋರ್ಟ್

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಒಂಭತ್ತು ತಿಂಗಳ ಒಳಗೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ.

ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ ಇತರರು ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.

ಲಖನೌ ನಗರದಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ.ಯಾದವ್ ಇದೇ ವರ್ಷ ಸೆಪ್ಟೆಂಬರ್ 30ರಂದು ನಿವೃತ್ತನಾಗುತ್ತಿದ್ದಾರೆ. ‘ವಿಚಾರಣೆಗೆ ಹೆಚ್ಚಿನ ಸಮಯಬೇಕು’ ಎಂದು ಯಾದವ್ ಅವರು ಈ ಹಿಂದೆ ಸುಪ್ರೀಂಕೋರ್ಟ್ ಗೆ ಪತ್ರ ಬರೆದಿದ್ದರು. ಇದೀಗ ಸುಪ್ರೀಂಕೋರ್ಟ್ ವಿಚಾರಣಾ ನ್ಯಾಯಾಧೀಶರ ಸೇವಾ ಅವಧಿಯನ್ನೂ ವಿಸ್ತರಿಸಿದೆ.

Leave a Reply

Your email address will not be published. Required fields are marked *

error: Content is protected !!