ಮಂಗಳೂರು ಜನತೆಗೆ ಶುಭ ಸುದ್ದಿ – ಕೋವಿಡ್ ಸೋಂಕಿತ ಮಗು ಸಂಪೂರ್ಣ ಗುಣಮುಖ

ಮಂಗಳೂರು – ಕೋವಿಡ್19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಇಂದು ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕರೋನಾ‌ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದು, ಶೇಕಡಾ 50 ಪ್ರಗತಿಯಾಗಿದೆ. ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ 11 ರವರೆಗೆ‌ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕರೋನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ. ಇದು ಜಿಲ್ಲೆಯ ಮಟ್ಟಿಗೆ ಆಶಾದಾಯಕ ಸಂಗತಿ.

Leave a Reply

Your email address will not be published. Required fields are marked *

error: Content is protected !!