ಗೋಪಾಲ್ ಭಂಡಾರಿ ನಿಧಾನಕ್ಕೆ ಡಾ. ಜಯಮಾಲ ಸಂತಾಪ

ಉಡುಪಿ ಜಿಲ್ಲೆ ಕಾರ್ಕಳದ ಮಾಜಿ ಶಾಸಕರಾದ ಶ್ರೀ ಗೋಪಾಲ ಭಂಡಾರಿ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಯಿತು. ಭಗವಂತನು ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಸದಾ ಜನಪರ ಕಾರ್ಯಗಳಿಗೆ ತಮ್ಮ ಸಮಯವನ್ನು ಮೀಸಲಿಡುತ್ತಿದ್ದ ಶ್ರೀ ಗೋಪಾಲ ಭಂಡಾರಿ ಅವರು ಸಾರ್ವಜನಿಕರ ನೆಚ್ಚಿನ ನಾಯಕರಾಗಿದ್ದರು.

ಅವರ ನಿಧನದಿಂದ ಸೂಕ್ತ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. 
ಡಾ. ಜಯಮಾಲ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು.

Leave a Reply

Your email address will not be published. Required fields are marked *

error: Content is protected !!