ಗೋಪಾಲ್ ಭಂಡಾರಿ ಅವರಿಗೆ ಸರಕಾರಿ ಗೌರವದೊಂದಿಗೆ ಅಂತಿಮ ವಿದಾಯ
ಉಡುಪಿ : ಗುರುವಾರ ನಿಧನರಾದ ಕಾರ್ಕಳದ ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರಿಗೆ ಇಂದು ಕಾರ್ಕಳ ಹೆಬ್ರಿಯ ಅವರ ಸ್ವಗೃಹದ ಜಮೀನಿನಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಅಂತಿಮ ವಿಧಿವಿಧಾನ ಸಲ್ಲಿಸುವ ಮೊದಲು ಮೂರು ಸುತ್ತು ಕುಶಾಲು ತೋಪು ಹಾರಿಸುವ ಮೂಲಕ ಗೌರವದ ವಿದಾಯ ಸಲ್ಲಿಸಲಾಯಿತು.
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು ಸರಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದರು.
ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಪ್ರತಾಪ್ ಚಂದ್ರ ಶೆಟ್ಟಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ , ಶಾಸಕರಾದ ಸುನಿಲ್ ಕುಮಾರ್, ರಾಜೇಗೌಡ , ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಯು.ಆರ್. ಸಭಾಪತಿ, ಎ.ಜಿ.ಕೋಡ್ಗಿ, , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾಚರ ಜೇಮ್ಸ್ , ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸರಕಾರಿ ಇಲಾಖೆಯ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.