“ಹಡಪದ ಅಪ್ಪಣ್ಣ” ಜಯಂತಿ ಆಚರಣೆ

ಬಂಟ್ವಾಳ: 12 ನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾದ ಹಡಪದ ಅಪ್ಪಣ್ಣನವರು ಇಂದಿಗೂ ಆದರ್ಶ ವ್ಯಕ್ತಿಯಾಗಿ ಉಳಿದಿದ್ದಾರೆ ಎಂದು ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಆಹಾರ ಶಾಖೆಯ ಶ್ರೀನಿವಾಸ್, ಪ್ರಥಮ ದರ್ಜೆ ಸಹಾಯಕ ರಾಜ್‌ಕುಮಾರ್, ಪ್ರಸನ್ನ ಕುಮಾರ್  ಪಕ್ಕಳ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!