ಭಾರಿ ಮಳೆ: ಇಂದು ಮತ್ತು ನಾಳೆ  ಮಂಗಳೂರು- ಬೆಂಗಳೂರು ರೈಲು ಸಂಚಾರ ರದ್ದು

ಮಂಗಳೂರು: ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಇಂದು ಮತ್ತು ನಾಳೆ  ಮಂಗಳೂರು- ಬೆಂಗಳೂರು ನಡುವಿನ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ‌ ಮಳೆಯಾಗುತ್ತಿರುವ ಹಿನ್ನಲೆ ಸಿರಿಬಾಗಿಲು ರೈಲ್ವೇ ಹಳಿಗೆ ಬೆಟ್ಟದಿಂದ ಭಾರಿ ಪ್ರಮಾಣದಲ್ಲಿ ಕಲ್ಲುಗಳು ಬೀಳುತ್ತಿದೆ.ಈ ಹಿನ್ನಲೆಯಲ್ಲಿ ಶಿರಾಡಿ ಘಾಟ್‌ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು
ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇನ್ನು 2 ಮೂರು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!