ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಎಚ್ಚರಿಕೆ. ಆ.7ರಿಂದ 9ರ ವರೆಗೆ ‘ರೆಡ್‌ ಅಲರ್ಟ್‌’ ಘೋಷಣೆ

ಮಡಿಕೇರಿ: ‘ಕೊಡಗಿನಲ್ಲಿ ಮತ್ತೆ ಭಾರಿ ಮಳೆ ಸುರಿಯಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು ಆ.7ರಿಂದ 9ರ ವರೆಗೆ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ‘ರೆಡ್‌ ಅಲರ್ಟ್‌’ ವೇಳೆ 204 ಮಿ.ಮೀಗಿಂತ ಅಧಿಕ ಮಳೆ ಬೀಳುವ ಸಾಧ್ಯತೆಯಿದೆ. ಹಾಗೆಯೇ, ಮಂಗಳವಾರ (ಆ.6ರಂದು) 115 ಮಿ.ಮೀನಿಂದ 204 ಮಿ.ಮೀ ವರೆಗೆ ಮಳೆ ಸುರಿಯಲಿದ್ದು ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದೆ.
ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಭಾಗಮಂಡಲ ಜಲಾವೃತಗೊಂಡಿದೆ

Leave a Reply

Your email address will not be published. Required fields are marked *

error: Content is protected !!