ಐಸಿವೈಎಂ ಸುವರ್ಣ ಮಹೋತ್ಸವ: ಸಂಚಾಲಕರಾಗಿ ಸ್ಟೀವನ್ ಕುಲಾಸೊ


ಕಟಪಾಡಿ : ಭಾರತೀಯ ಕಥೋಲಿಕ್ ಯುವ ಸಂಚಲನ (ಐಸಿವೈಎಂ) ಉದ್ಯಾವರ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಸುವರ್ಣ ಮಹೋತ್ಸವದ ಕಾರ್ಯಕಾರಿ ಸಮಿತಿಯೊಂದಿಗೆ ಸಹ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಜನವರಿ 19 ರಂದು ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರ ಉಪಸ್ಥಿತಿಯಲ್ಲಿ ರಾಜ್ಯ ರಾಷ್ಟ್ರದ ರಾಜಕೀಯ ಸಾಮಾಜಿಕ ಧಾರ್ಮಿಕ ಮುಖಂಡರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.


ಸುವರ್ಣ ಮಹೋತ್ಸವದ ವರ್ಷದಲ್ಲಿ ಒಟ್ಟು 50 ಕಾರ್ಯಕ್ರಮಗಳನ್ನು ಹಮ್ಮಿಕೊಂಡಲು ಕಾರ್ಯಕಾರಿ ಸಮಿತಿ ನಿರ್ಣಯ ಮಾಡಿದ್ದು, ಕಾರ್ಯಕ್ರಮಗಳ ಸಂಚಾಲಕರಾಗಿ ಐಸಿವೈಎಂ ಉಡುಪಿ ವಲಯದ ಮಾಜಿ ಅಧ್ಯಕ್ಷ ಸ್ಟೀವನ್ ಕುಲಾಸೊ ಉದ್ಯಾವರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸುವರ್ಣ ಮಹೋತ್ಸವದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!