ಅಕ್ರಮ ಹಣ ವರ್ಗಾವಣೆ:ಡಿಕೆಶಿ ಪುತ್ರಿಗೆ ಇಡಿ ನೋಟಿಸ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ಜಾರಿ ನಿರ್ದೇಶನಾಲಯ(ಇಡಿ) ವಶದಲ್ಲಿದ್ದು ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿಗೆ ಇಡಿ ನೋಟಿಸ್ ನೀಡಿದೆ.
ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಗೆ ಇಡಿ ಅಧಿಕಾರಿಗಳು ಸೆಪ್ಟೆಂಬರ್ 12ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಇನ್ನು ಸೆಪ್ಟೆಂಬರ್ 13ರಂದು ಡಿಕೆ ಶಿವಕುಮಾರ್ ಅವರ ಇಡಿ ಕಸ್ಟಡಿ ಅಂತ್ಯವಾಗಲಿದೆ.
ಪ್ರತಿದಿನ ಕುಟುಂಬ ಸದಸ್ಯರು ಹಾಗೂ ವಕೀಲರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ಮತ್ತೊಂದೆದೆ ಡಿಕೆ ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 13ಕ್ಕೆ ನ್ಯಾಯಾಲಯ ಮುಂದೂಡಿದೆ.
ನ್ಯಾಯಾಲಯದ ತೀರ್ಪಿನಿಂದ ಕಾನೂನು ಸಮರದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಹಿನ್ನೆಡೆಯಾಗಿತ್ತು. ಹೀಗಾಗಿ ಹತ್ತು ದಿನಗಳ ಕಾಲ ಇಡಿ ವಶದಲ್ಲಿ ಇರಬೇಕಾಗಿ ಬಂದಿತ್ತು.