9 ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿ ನಿರ್ಬಂಧ: ವೈದ್ಯಕೀಯ ಶಿಕ್ಷಣ ಸಚಿವ
ಬೆಂಗಳೂರು: ಕೊರೊನಾ ಬಾಧಿತ 9 ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿ ನಿರ್ಬಂಧ ಜಾರಿ ಮಾಡಲಾಗಿದೆ ಎಂದು ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮಾರ್ಚ್ 31ರವರೆಗೆ ಈ ನಿರ್ಬಂಧ ಮುಂದುವರೆಯಲಿದೆ.
ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್ ಸಂಚಾರ ರದ್ದು ಪಡಿಸಲಾಗಿದೆ. ಅಗತ್ಯ ಸೇವೆಗಳಿಗೆ ನಿರ್ಬಂಧವಿಲ್ಲ. ಎಲ್ಲ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಕಲಬುರ್ಗಿ, ಧಾರವಾಡ, ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿಯ ನಿರ್ಬಂಧ ಜಾರಿ ಮಾಡಲಾಗಿದೆ.
ಮಾರ್ಚ್ 31ರವರೆಗೆ ನಿರ್ಬಂಧದ ಆಜ್ಞೆ ಜಾರಿಯಲ್ಲಿರುತ್ತದೆ ಎಂದು ಸಚಿವರ ಹೇಳಿಕೆ ಹೊರಬಿದ್ದ ಬೆನ್ನಿಗೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧೆಡೆ ಪೊಲೀಸರು ಬೀದಿಗಿಳಿದಿದ್ದು ಅಂಗಡಿಗಳ ಬಾಗಿಲು ಹಾಕಿಸುತ್ತಿದ್ದಾರೆ. ಬೀದಿಯಲ್ಲಿ ನಿಂತಿರುವ ಜನರನ್ನು ಮನೆಗೆ ಹೋಗುವಂತೆ ಹೇಳುತ್ತಿದ್ದಾರೆ.