ಕೊರೋನಾ ವೈರಸ್ ಗೆ ಭಾರತದಲ್ಲಿ ನಾಲ್ಕನೇ ಬಲಿ!
ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಪಂಜಾಬ್ ನಲ್ಲಿ ಸುಮಾರು 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾದಂತಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ ದೇಶದಲ್ಲಿ ಈ ವರೆಗೂ 167 ಮಂದಿ ಸೋಂಕಿಗೆ ತುತ್ತಾಗಿದ್ದು, ಪಂಜಾಬ್ ನಲ್ಲಿ ಸೋಂಕಿತರ ಸಂಖ್ಯೆ 2ಕ್ಕೇರಿದ್ದು, ಅಂತೆಯೇ ಮೊದಲ ಸಾವು ಸಂಭವಿಸಿದೆ. ಪಂಜಾಬ್ನಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿ ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕೊರೋನಾ ಶಂಕಿತರನ್ನು ಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲು ಸಾಧ್ಯವಾಗದ ಕಾರಣ ಅವರನ್ನು ಮನೆಯಲ್ಲೇ ಇರಿಸಿ, 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ.