ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಜಿಲ್ಲಾಧಿಕಾರಿ ಎಚ್ಚರಿಕೆ

ಉಡುಪಿ: ಜಿಲ್ಲೆಗೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಈ ಕುರಿತು ಕ್ವಾರಂಟೈನ್ ಕೇಂದ್ರಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ, ಅಡ್ಡಿಪಡಿಸುವವರನ್ನು ಸೆಕ್ಷನ್ 188, 269, 270 ಪ್ರಕಾರ ಜೈಲುಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.


ಕ್ವಾರಂಟೈನ್ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ನೀರಿನ ಸಮಸ್ಯೆಯಿದ್ದಲ್ಲಿ ಸಂಬ0ದಪಟ್ಟ ಪಂಚಾಯತ್ ಮೂಲಕ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುವುದು, ಸಂಸ್ಥೆಯ ಸಿಬ್ಬಂದಿಗಳು ಅಗತ್ಯ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಲಾಗುವುದು, ಕೇಂದ್ರದ ನಿರ್ವಹಣೆಗೆ ಅಗತ್ಯವಿದ್ದಲ್ಲಿ ಅದೇ ಸಂಸ್ಥೆಯ ನೌಕರರನ್ನು ನಿಯೋಜಿಸಲಾಗುವುದು ಹಾಗೂ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು , ಎಲ್ಲಾ ಕ್ವಾರಂಟೈನ್ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!