ಜೇಟ್ಲಿ ಆರೋಗ್ಯ ಚಿಂತಾಜನಕ : ಏಮ್ಸ್ ಆಸ್ಪತ್ರೆಯತ್ತ ರಾಷ್ಟ್ರಪತಿ
ಹೊಸದಿಲ್ಲಿ: ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯ ಚಿಂತಾಜನಕವಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಅರುಣ್ ಜೇಟ್ಲಿ ಆಗಸ್ಟ್ 9ರಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ತೀವ್ರ ನಿಗಾ ಘಟಕದಲ್ಲಿರುವ ಜೇಟ್ಲಿ ಅವರ ಆರೋಗ್ಯ ವಿಚಾರಿಸಲು ಅಗಸ್ಟ್ 9ರಂದೇ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಆಸ್ಪತ್ರೆಗೆ ಭೇಟಿ ನೀಡಿದ್ದರು.