ಬಾಬರಿ ಮಸೀದಿ ಸಂಧಾನ,ಮುಸ್ಲಿಂ ಮುಂದಾಗಬೇಕಿತ್ತು:ಯೋಗಿ

ಲಖನೌ: ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದವನ್ನು ಸಂಧಾನದ ಮೂಲಕ ಪರಿಹರಿಸಿಕೊಳ್ಳಲು ಮುಸ್ಲಿಂ ಸಮುದಾಯ ಮುಂದಾಗಬೇಕಿತ್ತು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.ವಿಚಾರಣೆಯನ್ನು ಅಕ್ಟೋಬರ್ 18ರೊಳಗೆ ಪೂರ್ಣಗೊಳಿಸುವ ಗಡುವನ್ನು ಸುಪ್ರೀಂ ಕೋರ್ಟ್‌ ಹಾಕಿಕೊಂಡ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ವಿವಾದವನ್ನು ಸಂಧಾನದ ಮೂಲಕ ಪರಿಹರಿಸಿಕೊಳ್ಳಲು ಸುಪ್ರೀಂ ಕೋರ್ಟ್‌ ಸಮಯಾವಕಾಶ ನೀಡಿದ್ದಾಗ ಮುಸ್ಲಿಂ ಸಮುದಾಯದವರು ಅದಕ್ಕೆ ಮುಂದಾಗಿದ್ದರೆ ಒಳ್ಳೆಯದಿತ್ತು. ಆದರೆ ಹಾಗಾಗಲಿಲ್ಲ. ಜನರು ಸಕಾರಾತ್ಮಕವಾಗಿ ಯೋಚಿಸಿದಾಗ ಮಾತ್ರ ಪರಿಹಾರದತ್ತ ಸಾಗಬಹುದು. ಆದರೆ ಅವರು ಮೊಂಡುತನ ತೋರಿದರೆ ಸುಪ್ರೀಂ ಕೋರ್ಟ್‌ ಮಾತ್ರವೇ ನಿರ್ಧಾರ ಕೈಗೊಳ್ಳಬೇಕಷ್ಟೆ’ ಎಂದು   ಸುದ್ದಿತಾಣಕ್ಕೆವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಸತ್ಯಾಂಶಗಳು ಮತ್ತು ಸಾಕ್ಷಿಗಳ ಆಧಾರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ನಮಗೆ ಭರವಸೆಯಿದೆ ಹಾಗೂ ನಾವದನ್ನು ಪಾಲಿಸುತ್ತೇವೆ. ಈ ಹಿಂದೆಯೂ ನಾವು ಸುಪ್ರೀಂ ಕೋರ್ಟ್‌ ತೀರ್ಪುಗಳನ್ನು ನಾವು ಪಾಲಿಸಿದ್ದೇವೆ’ ಎಂದೂ ಯೋಗಿ ಹೇಳಿದ್ದಾರೆ..

ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದವನ್ನು ಸಂಧಾನದ ಮೂಲಕ ಪರಿಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಮಾರ್ಚ್‌ನಲ್ಲಿ ನಿರ್ದೇಶನ ನೀಡಿತ್ತು. ಅಲಹಾಬಾದ್ ಹೈಕೋರ್ಟ್‌ ಅಯೋಧ್ಯೆಯ ವಿವಾದಿತ ನಿವೇಶನ ಹಂಚಿಕೆ ಮಾಡಿ 2010ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ 14 ಮೇಲ್ಮನವಿ ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದವು


Leave a Reply

Your email address will not be published. Required fields are marked *

error: Content is protected !!