ಮಾಜಿ ಶಾಸಕ ಗೋಪಾಲ್ ಭಂಡಾರಿಯವರಿಗೆ ಕಾಪು ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ

ಕಾಪು ಕಾಂಗ್ರೆಸ್ ಕಾರ್ಯಕರ್ತರು ದೀಪ ಬೆಳಗಿಸಿ ಗೋಪಾಲ ಭಂಡಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನುಡಿ ನಮನ ಸಲ್ಲಿಸಿದರು.

ಈ ಸಂದರ್ಭ ನುಡಿ ನಮನ ಸಲ್ಲಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಜಕಾರಣದಲ್ಲಿ ಸಜ್ಜನ ರಾಜಕಾರಣಿ ಯಾಗಿ, ಅಜಾತಶತ್ರು ನಾಯಕನಾಗಿ, ಅಪರೂಪದ ರಾಜಕಾರಣಿಯಾದ ಗೋಪಾಲ ಭಂಡಾರಿಯವರನ್ನು ನಾವು ಇಂದು ಅಗಲಿದ್ದೇವೆ.

ಬಡವರು ಮತ್ತು ದುರ್ಬಲರ ಬಗ್ಗೆ ವಿಶೆಷ ಕಾಳಜಿ ವಹಿಸಿದ್ದರು, ಅವರ ನಿಧನದಿಂದ ರಾಷ್ಟ್ರ ರಾಜಕಾರಣಕ್ಕೆ ತುಂಬಲಾರದ ನಷ್ಟ ಆಗಿದೆ ಎಂದರು, ಇದೇ ವೇಳೆ ಇತ್ತೀಚೆಗೆ ಮೃತಪಟ್ಟ ಹಿರಿಯ ಕಾಂಗ್ರೆಸ್ಸಿಗ ರಾಮ ಬಂಗೇರ ಹೆಜಮಾಡಿಯವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಕಾಂಗ್ರೆಸ್ ಅಧ್ಯಕ್ಷ, ನವೀನ್ ಚಂದ್ರ ಸುವರ್ಣ, ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!