ಕಾರ್ಯದಕ್ಷತೆ ತರಬೇತಿ ಶಿಬಿರ

ಬಂಟ್ವಾಳ: ಸಹಕಾರ ಸಂಘಗಳು ಅಭಿವೃದ್ಧಿ ಹೊಂದುವಲ್ಲಿ ಸಂಘದ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳ ಕಾರ್ಯದಕ್ಷತೆ ಅತೀ ಪ್ರಾಮುಖ್ಯವಾಗಿದ್ದು,ಈ ನಿಟ್ಟಿನಲ್ಲಿ ಇಂತಹ ತರಬೇತಿ ಶಿಬಿರ ಸ್ತುತ್ಯಾರ್ಹವಾಗಿದೆ ಎಂದು ದ.ಕ.ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಹೇಳಿದ್ದಾರೆ.   

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಂಟ್ವಾಳ ತಾಲೂಕಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಆಡಳಿತ ನಿರ್ವಹಣೆ, ಸಹಕಾರಿ ಸಂಘಗಳ ಚುನಾವಣೆ ಮತ್ತು ಲೆಕ್ಕ ಪತ್ರಗಳ ನಿರ್ವಹಣೆಯ ಕುರಿತು ಕಾರ್ಯದಕ್ಷತೆ ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಹೈನುಗಾರಿಕೆಯಿಂದ ರೈತರು ಸ್ವಾಭಿಮಾನದ ಬದುಕು ಕಂಡುಕೊಳ್ಳಲು ಸಾಧ್ಯ ಎಂದರು.

ದ.ಕ.ಜಿಲ್ಲಾ ಸಹಕಾರ ಯೂನಿಯನ್ ನ ನಿರ್ದೇಶಕಿ ಸವಿತಾ ಎನ್.ಶೆಟ್ಟಿ ಶಿಬಿರದ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಅತಿಥಿಯಾಗಿದ್ದ ಸಹಕಾರ ಸಂಘಗಳ ಮಂಗಳೂರು ಉಪವಿಭಾಗದ ಸಹಾಯಕ ನಿಬಂಧಕ ಎಸ್.ಜಿ.ಮಂಜುನಾಥ್ ಮಾತನಾಡಿ, ಸಹಕಾರ ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬಂದಿಗಳು ಉತ್ತಮ ಸಂಬಂಧವನ್ನು ಕಾಯ್ದುಕೊಳ್ಳಬೇಕು,ಸಹಕಾರ ಕಾಯ್ದೆ,ಕಾನೂನನ್ನು ಅರಿತುಕೊಳ್ಳಬೇಕು ಸಂಘದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ಸಹಕಾರ ಇಲಾಖೆಯ ಗಮನಕ್ಕೆ ತಂದು ಪರಿಹರೊಸಿಕೊಂಡು ಸಂಗವನ್ನು ಸುಗಮವಾಗಿ ಮುನ್ನಡೆಸಬೇಕು ಎಂದು ಸಲಹೆ ನೀಡಿದರು.

ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್ ಮಾತನಾಡಿ,ಸಹಕಾರ ಸಂಘದ ಅಭಿವೃದ್ಧಿಯ ದೃಷ್ಟಿಯಿಂದ ಸಿಬಂದಿಗಳು,ಆಡಳಿತ ಮಂಡಳಿ ಸದಸ್ಯರಿಗೆ ಕಾನೂನಿನ ಅರಿವಿನ ಅಗತ್ಯವಿದೆ.ಹಾಗೆಯೇ ಆರ್ಥಿ ಕ ಅಭಿವೃದ್ಧಿ ಹೊಂದಲು ಕಾರ್ಯಕ್ಷತೆಯ ತರಬೇತಿಯ ಅವಶ್ಯಕವಾಗಿದೆ ಎಂದರು. 

ಕೆಎಂಎಫ್ ನ ಉಪ ವ್ಯವಸ್ಥಾಪಕ ಎಸ್ .ಪ್ರಭಾಕರ್,ಮಾರ್ಗ ವಿಸ್ತರಣಾಧಿಕಾರಿ ಜಗದೀಶ್,ಬಂಟ್ವಾಳ ತಾ.ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿರಾವ್,ಸಹಕಾರ ಸಂಘಗಳ ನಿವೃತ್ತ ಲೆಕ್ಕ ಪರಿಶೋಧಕ ಹೆನ್ರಿಡಿಸೋಜ ಅವರು ವಿವಿಧ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.ದ.ಕ.ಜಿಲ್ಲಾ ಸಹಕಾರ ಯೂನಿಯನ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪುರುಷೋತ್ತಮ ಎಸ್.ಪಿ.ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು.ಯೂನಿಯನ್ ನ ಮೆನೇಜರ್ ಬಿ.ಆರ್.ನಾಗಪ್ರಸಾದ್ ವಂದಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ದ.ಕ.ಜಿಲ್ಲಾ ಸಹಕಾರ ಯೂನಿಯನ್ ಲಿ.ಮಂಗಳೂರು,ದ.ಕ.ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ.ಮಂಗಳೂರು,ಸಹಕಾರ ಇಲಾಖೆ ದ.ಕ.ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ತರಬೇತಿ ಶಿಬಿರ ನಡೆಯಿತು.

Leave a Reply

Your email address will not be published. Required fields are marked *

error: Content is protected !!