ಕಟಪಾಡಿ: ಜ.20ರಂದು ಸಿಎಎ,ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ

ಕಾಪು: ಕೇಂದ್ರ ಸರಕಾರದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಕಾಯಿದೆಯನ್ನು ವಿರೋಧಿಸಿ ಉಡುಪಿ ನಾಗರಿಕ ಹಕ್ಕು ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶವನ್ನು ಜ.20ರಂದು ಮಧ್ಯಾಹ್ನ 3.30ಕ್ಕೆ ಕಟಪಾಡಿ ಪೇಟೆಯಲ್ಲಿ ಆಯೋಜಿಸಲಾಗಿದೆ.ಕಾಪು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಸ್‌ಎಫ್ ರಾಜ್ಯ ಕಾರ್ಯದರ್ಶಿ ಅಶ್ರಫ್ ರಝಾ ಅಂಜದಿ, ಈ ಸಮಾವೇಶವನ್ನು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಅಲ್‌ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ಉದ್ಘಾ ಟಿಸಲಿರುವರು ಎಂದರು.ಮುಖ್ಯ ಭಾಷಣಕಾರರಾಗಿ ಕೆ.ಎಂ.ಸಿದ್ದೀಕ್ ಮೋಂಟುಗೋಳಿ, ಸುಧೀರ್ ಕುಮಾರ್, ಮಧುಸೂದನ್ ಗೌಡ ಹಾಗೂ ಪ್ರಗತಿಪರ ಹೋರಾಟಗಾರರು, ಚಿಂತಕರು ಭಾಗವಹಿಸಲಿರುವರು. ಈ ಸಮಾವೇಶಕ್ಕೆ ಸಾವಿರಾರು ಮಂದಿ ಆಗಮಿಸುವ ನಿರೀಕ್ಷೆ ಹೊಂದಲಾಗಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್, ಸುನ್ನೀ ಅಧ್ಯಾಪಕರ ಒಕ್ಕೂಟದ ಕಾರ್ಯದರ್ಶಿ ಇಬ್ರಾಹಿಂ ನಯೀಮಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!