ನಾಳೆ ಕೋಟ ಶ್ರೀನಿವಾಸ ಪೂಜಾರಿ ಅಭಿನಂದನಾ ಕಾರ್ಯಕ್ರಮ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ಇದರ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ದಿನಾಂಕ : 05-09-2019 ಗುರುವಾರ ಪೂರ್ವಾಹ್ನ 11:30 ಕ್ಕೆ ರಮಾ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್, ಎಮ್ಮೆಕೆರೆ ಪಾಂಡೇಶ್ವರದಲ್ಲಿ ಶ್ರೀ ಯಶ್‌ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಈ ಸಮಾರಂಭದಲ್ಲಿ ಕರ್ನಾಟಕ ಸರಕಾರದ ನೂತನ ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಸನ್ಮಾನ್ಯ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!