ಟೆಲಿಫೋನ್ ಕದ್ದಾಲಿಕೆ ಸಿಬಿಐ ತನಿಖೆ: ಕುಮಾರಸ್ವಾಮಿ ಸಂಪೂರ್ಣ ಬೆಂಬಲ
ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಜೆಡಿಎಸ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಿಬಿಐಗೆ ವಹಿಸಿರುವುದಾಗಿ ಭಾನುವಾರ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿಬಿಐ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದ ನೆರವು ಪಡೆದು ತನಿಖೆ ನಡೆಸಲಿ. ಇದಕ್ಕೆ ಜೆಡಿಎಸ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.