ರೋಜರಿ ಕೋ-ಅಪರೇಟಿವ್ ಸೊಸೈಟಿಗೆ “ಉತ್ತಮ ಸಹಕಾರ ಸಂಘ ಪ್ರಶಸ್ತಿ”

ಕುಂದಾಪುರ, ನ.19: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಕೇಂದ್ರ. ಬ್ಯಾಂಕ್ ನಿ. ಮಂಗಳೂರು,. ಉಡುಪಿ ಜಿಲ್ಲಾ ಸಹಕಾರ ಯುನಿಯನ್ ನಿ.ಉಡುಪಿ,. ಮತ್ತು ಸಹಾಕಾರಿ ಇಲಾಖೆ, ಹಾಗೂ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆದ 66 ನೇ ಅಖಿಲ ಭಾತರ ಸಹಕಾರ ಸಪ್ತಾಹ 2019 ಸಮಾವೇಷದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಗಾಗಿ ಕುಂದಾಪುರ ರೋಜರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಗೆ ರಾಜ್ಯ ಮಟ್ಟದಲ್ಲಿ 2019 ರ ‘ಉತ್ತಮ ಸಹಕಾರ ಸಂಘ ಪ್ರಶಸ್ತಿ’ ಯನ್ನು ನೀಡಿ ಗೌರವಿಸಲಾಯಿತು .


ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆಯನ್ನು ಒಳಗೊಂಡ ಈ ಪ್ರಶಸ್ತಿ ಕುಂದಾಪುರ ರೋಜರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಜಾನ್ಸನ್ ಡಿಆಲ್ಮೇಡಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಸ್ಕಲ್ ಡಿಸೋಜಾ ಇವರು ಡಾ|ಎಂ.ಎನ್. ರಾಜೇಂದ್ರ ಕುಮಾರ್, ಅಧ್ಯಕ್ಷರು ದಕ್ಷಿಣ ಕ. ಜಿ.ಸ. ಬ್ಯಾಂಕ್ ನಿ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ. ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿ. ಬೆಂಗಳೂರು ಮತ್ತು ಎನ್.ಗಂಗಣ್ಣ ಅಧ್ಯಕ್ಷರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ. ಬೆಂಗಳೂರು ಹಾಗೂ ಇನ್ನಿತರ ಗಣ್ಯರಿಂದ, ವಿವಿಧ ಸಹಕಾರಿ ಸಂಘದ 3 ಸಾವಿರಕ್ಕೂ ಅಧಿಕ ಸದಸ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡರು. ವರದಿ ವರ್ಷದಲ್ಲಿ ಧರ್ಮದ ನಿಧಿ ಮತ್ತು ಉಪಕಾರ ನಿಧಿಯಿಂದ ಅನೇಕ ಯೋಜನೆಗಳಿಗೆ ಹಣಕಾಸು ನೆರವು ನೀಡಿದ್ದು ಇದರ ಪರಿಣಾಮಗಳು ಉತ್ತಮವಾಗಿದ್ದು ಅಪಾರ ಮೆಚ್ಚುಗೆ ಹಾಗೂ ಜನ ಮನ್ನಣೆಯನ್ನು ಪಡೆದಿದೆ.

Leave a Reply

Your email address will not be published. Required fields are marked *

error: Content is protected !!