ಟಿಪ್ಪು ಜಯಂತಿ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ: ಕೆ.ಜೆ. ಬೋಪಯ್ಯ

ಉಡುಪಿ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಈ ಹಿಂದೆ ಕಾಂಗ್ರೆಸ್ ಸರ್ಕಾರ ಮತ್ತು ಮೈತ್ರಿ ಸರಕಾರ ಆಚರಿಸುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಬೇಕೆಂದು ವಿರಾಜಪೇಟೆಯ ಶಾಸಕ ಕೆ.ಜೆ. ಬೋಪಯ್ಯ ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

 ಕಳೆದ 2014ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುತ್ತಿದ್ದ ಟಿಪ್ಪು ಜಯಂತಿ ಪ್ರತಿ ವರ್ಷ ಡಿಸೆಂಬರ್ 10ರಂದು ರಾಜ್ಯದಾದ್ಯಂತ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿದೆ. ಈ ಟಿಪ್ಪು ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತವಾಗಿತ್ತು ಆದ್ದರಿಂದ ಈ ಕಾರ್ಯಕ್ರಮವನ್ನು ರದ್ದುಪಡಿಸಬೇಕೆಂದು ಮಾಜಿ ಸಭಾಧ್ಯಕ್ಷರು ವಿರಾಜಪೇಟೆಯ ಶಾಸಕ ಕೆ.ಜೆ. ಬೋಪಯ್ಯ ಮುಖ್ಯಮಂತ್ರಿಯವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಕಳೆದ ಐದು ವರ್ಷಗಳಿಂದ ಟಿಪ್ಪು ಜಯಂತಿ ಆಚರಿಸುವ ಸಂದರ್ಭ ಪರ-ವಿರೋಧಗಳು ನಡೆದು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ ಮಾತ್ರವಲ್ಲದೆ ,ಕೊಡಗು ಜಿಲ್ಲೆಯಲ್ಲಿ  ನಡೆದ ಗಲಭೆಯಲ್ಲಿ
ಓರ್ವನ ಸಾವು ಕೂಡ ಆಗಿತ್ತು, ಅಂದಿನಿಂದ ಇಂದಿನವರೆಗೆ ಕೊಡಗಿನಲ್ಲಿ ಅಶಾಂತಿಯ ವಾತಾವರಣವಿದೆ .ಇದು ಜನರ ನಡುವಿನ ಸಾಮರಸ್ಯಕ್ಕೆ ತೊಂದರೆಯಾಗಿದ್ದು ಇದನ್ನು ತಕ್ಷಣದಿಂದಲೇ ರದ್ದುಪಡಿಸಬೇಕೆಂದು ಕೆ.ಜೆ ಬೋಪಯ್ಯ ಮುಖ್ಯಮಂತ್ರಿ  ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!