ಸರ್ದಾರ್ ವಲ್ಲಭಾಬಾಯಿ ಪಟೇಲರಂತೆ ಅಮಿತ್ ಶಾ ಕೂಡ ಉಕ್ಕಿನ ಮನುಷ್ಯ : ಕೋಟ ಶ್ರೀನಿವಾಸ
ಉಡುಪಿ: ಜಮ್ಮು-ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ಈ ಐತಿಹಾಸಿಕ ನಿರ್ಧಾರವನ್ನು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು.
ಉಡುಪಿಯಲ್ಲಿ ಮಾಧ್ಯಮದವರೊ೦ದಿಗೆ ಮಾತನಾಡಿದ ಇವರು, ಈ ಐತಿಹಾಸಿಕ ನಿರ್ಧಾರವನ್ನು ಲೋಕಸಭೆಯಲ್ಲಿ ಮಂಡಿಸಿದ ಅಮಿತ್ ಶಾ ಅವರು ಸರ್ದಾರ್ ವಲ್ಲಭಾಬಾಯಿ ಪಟೇಲರಂತೆ ಉಕ್ಕಿನ ಮನುಷ್ಯರಾಗಿದ್ದಾರೆ. ಭಾರತದ ಜನ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಿದ್ದು ಇಂದು ಸಾರ್ಥಕವಾಯಿತು ಎಂದು ಹೇಳಿದರು.
ಕಾಶ್ಮೀರಕ್ಕೆ ನೀಡಿದ್ದ 370 ನೇ ವಿಧಿಯ ಮೂಲಕ ಕಾಶ್ಮೀರದ ಭೂಮಿಯನ್ನು ಬೇರೆ ಯಾವ ಭಾರತದ ಪ್ರಜೆಯೂ ಕೊಂಡುಕೊಳ್ಳಲು ಆಗುವುದಿಲ್ಲ. ಇದರ ಜೊತೆಗೆ ಭಾರತದ ಸಂವಿಧಾನದ ಯಾವುದೇ ಕಾನೂನುಗಳು ಕಾಶ್ಮೀರಕ್ಕೆ ಅನ್ವಯವಾಗುತ್ತಿರಲಿಲ್ಲ. ಈ ಎಲ್ಲಾ ವಿಚಾರದಿಂದ ಭಾರತದಿಂದ ಕಾಶ್ಮೀರ ಬೇರ್ಪಟ್ಟು ಹೋಗುತ್ತದೆ ಎನ್ನು ಆತಂಕ ಎಲ್ಲರಲ್ಲೂ ಎದುರಾಗಿತ್ತು.
ಆದರೆ ಮೋದಿ ಮತ್ತು ಅಮಿತ್ ಶಾ ಇಂದು ಆ ವಿಧಿಯನ್ನು ತೆಗೆದು ಹಾಕುವ ಮೂಲಕ ಆತಂಕವನ್ನು ದೂರ ಮಾಡಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪ್ರತಿಯೊಬ್ಬ ರಾಷ್ಟ್ರಭಕ್ತನೂ ಪಕ್ಷ ಬೇಧ ಮರೆತು ಬೆಂಬಲಿಸಬೇಕು. ನಾನು ಭಾರತೀಯ ಎಂದು ಹೇಳಿಕೊಳ್ಳಲು ಇಂದು ಹೆಮ್ಮೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದರು