ಮಧ್ಯಪ್ರದೇಶ: ಕಮಲ್ ನಾಥ್ ಸರ್ಕಾರ ಪತನ
ಭೋಪಾಲ್: ಮಧ್ಯಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಶುಕ್ರವಾರ ಮಹತ್ವದ ತಿರುವು ಪಡೆದು, ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ವಿಶ್ವಾಸಮತ ಯಾಚನೆಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ. ಕಾಂಗ್ರೆಸ್‌ನ 16 ಬಂಡಾಯ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ವಿಧಾನಸಭೆ ಸ್ಪೀಕರ್ ಎನ್.ಪಿ. ಪ್ರಜಾಪತಿ ಶುಕ್ರವಾರ ಬೆಳಿಗ್ಗೆ ಘೋಷಿಸಿದ್ದರು. ಇದರೊಂದಿಗೆ ಪಕ್ಷದ ಒಟ್ಟು 22 ಶಾಸಕರ ರಾಜೀನಾಮೆ ಅಂಗೀಕಾರವಾದಂತಾಯಿತು ಸರ್ಕಾರ ಅಲ್ಪಮತಕ್ಕೆ ಕುಸಿದ ಪರಿಣಾಮ ಕಮಲ್ ನಾಥ್ ರಾಜೀನಾಮೆ ನೀಡಿದ ರು. ಶುಕ್ರವಾರ ಸಂಜೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿತ್ತು. |