ಮಡಿಕೇರಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭಾಗಮಂಡಲ – ನಾಪೋಕ್ಲು – ಮಡಿಕೇರಿ ರಸ್ತೆ ಸಂಚಾರ ಸ್ಥಗಿತ
ಮಡಿಕೇರಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭಾಗಮಂಡಲದಲ್ಲಿ ಕಾವೇರಿ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ – ನಾಪೋಕ್ಲು ಮತ್ತು ಭಾಗಮಂಡಲ – ಮಡಿಕೇರಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
5.8.2019 ರಿಂದ ಮುಂದಿನ ನಾಲ್ಕು ದಿನದ ವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ
ಈಗಾಗ್ಲೇ ಕೊಡಗು ಜಿಲ್ಲಾಡಳಿತ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದು, ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಹಟ್ಟಿಹೊಳೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಧಾರೆಶಾಯಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಸಂಚಾರ ಅಸ್ಥವ್ಯಸ್ಥವಾಗಿದ್ದು, ಕೆಲಹೊತ್ತು ಜನರು ಪರದಾಡುವ ಸ್ಥಿತಿ ಎದುರಾಗಿತ್ತು.