ಮಹಾಲಕ್ಷ್ಮೀ ಕೊ ಆಪರೇಟಿವ್ ಬ್ಯಾಂಕ್‌ಗೆ ಸಾಧನಾ ಪ್ರಶಸ್ತಿ

ಮಹಾಲಕ್ಷ್ಮೀ ಕೊ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2018-19ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಲಭಿಸಿದೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ರವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, ಕಳೆದ ೯ ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ 18% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ, ವಿಶೇಷವಾಗಿ ಮಹಿಳಾ ಮೀನುಗಾರರ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿರುವ ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿ ಲಭಿಸಿದೆ.

Leave a Reply

Your email address will not be published. Required fields are marked *

error: Content is protected !!