ದೇಶಕಟ್ಟುವ ವಿದ್ಯಾರ್ಥಿಗಳನ್ನಾಗಿ ರೂಪಿಸಿ : ಶಾಸಕ ನಾಯ್ಕ್

ಬಂಟ್ವಾಳ: ಭಾರತ  ಜಗತ್ ಗುರುವಾಗುವ ಉದ್ದೇಶದಿಂದ ದೇಶ ಕಟ್ಟಲು ಬೇಕಾಗಿರುವ ವಿದ್ಯಾರ್ಥಿಗಳನ್ನಾಗಿ  ರೂಪಿಸುವ ಮಹತ್ತರವಾದ ಜವಾಬ್ದಾರಿ ಶಿಕ್ಷಕರ ಮೇಲಿದ್ದು,  ಅಂತಹ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಇವರ ಆಶ್ರಯದಲ್ಲಿ ಬಂಟ್ವಾಳ ರೋಟರಿ ಕ್ಲಬ್ ನ  ಸಹಯೋಗದಲ್ಲಿ ಆದರ್ಶ ಶಿಕ್ಷಕ ಖ್ಯಾತ ಶಿಕ್ಷಣ ತಜ್ಞ ಭಾರತದ ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನದ ನೆನಪಿಗಾಗಿ ಬಂಟ್ವಾಳ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಗುರುವಂದನಾ ಸಮಾರಂಭ-2019 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಿತ ಸಮಾಜದಿಂದ ದೇಶದ ಬದಲಾವಣೆ ಸಾಧ್ಯ, ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರದ ಶಿಕ್ಷಣ ಪ್ರತಿಯೊಂದು ಸಂಸ್ಥೆಗಳು ನೀಡಬೇಕು ಎಂದು ಅವರು ಹೇಳಿದರು.
ಪ್ರಧಾನ ಉಪನ್ಯಾಸಗೈದ ಜೇಸಿ ರಾಷ್ಟ್ರೀಯ ತರಬೇತುದಾರ ಕೃಷ್ಣಮೋಹನ್ ಪಿ.ಎಸ್.ರವರು,  ಶಾಲೆಯಲ್ಲಿರುವ ಮಕ್ಕಳು ತಮ್ಮ ಮಕ್ಕಳು ಎಂದು ಅರಿತುಕೊಳ್ಳಬೇಕು, ಶಿಕ್ಷಕರು ಕ್ರಿಯಾಶೀಲರಾದಾಗ  ಮಹತ್ತರ ಬದಲಾವಣೆ ಸಾಧ್ಯ,ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕನ ಪಾತ್ರ ಮುಖ್ಯವಾಗಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಕೇವಲ ವ್ಯಕ್ತಿಯಾಗದೆ ಶಕ್ತಿಯಾಗಬೇಕು ಎಂದು ತಿಳಿಸಿದರು.

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ,ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ ಬಂಗೇರ, ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಎಂ.ಎಸ್.ಮಹಮ್ಮದ್,ಮಮತಾ ಡಿ.ಎಸ್. ಗಟ್ಟಿ,  ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾಮಾವೆ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ,ಬಂಟ್ವಾಳ ರೋಟರಿ ಕ್ಲಬ್  ಅಧ್ಯಕ್ಷೆ ಶಿವಾನಿ ಬಾಳಿಗಾ , ತಾ ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೆರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ , ಪ್ರೌಡ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜೊಯೆಲ್ ಲೊಬೊ, ಪ್ರೌಡಶಾಲಾ ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷ ರಮಾನಂದ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಿನ್ನಪ್ಪ, ಅನುದಾನಿತ ಶಾಲಾ  ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಾಯ ಕಾಮತ್, ಎಸ್.ಸಿ.,ಎಸ್.ಟಿ.ನೌಕರರ ಸಂಘದ ಅಧ್ಯಕ್ಷ ಶಂಕರ್, ಚಿತ್ರಕಲಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೆನ್ನಕೇಶವ, ಟಿ.ಜಿ.ಟಿ.ಸಂಘದ ಅಧ್ಯಕ್ಷೆ ಶ್ರೀಮತಿ, ಶಿಕ್ಷಕರ ದಿನಾಚರಣೆ ಸಮಿತಿ ಅಧ್ಯಕ್ಷೆ ಶಾರದಾ ಎಸ್.ರಾವ್,ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ  ರಮೇಶ್ ನಾಯಕ್ ರಾಯಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ವೇದಿಕೆಯಲ್ಲಿದ್ದರು. ‌
ಈ ಸಂದರ್ಭ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿಕ್ಷಕರನ್ನು ಹಾಗೂ  ಉತ್ತಮ ಶಿಕ್ಷಕ ಪ್ರಶಸ್ತಿವಿಜೇತ ಶಿಕ್ಷಕರನ್ನು ಗೌರವಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಸ್ವಾಗತಿಸಿದರು.
ರಾಮಚಂದ್ರ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!