ಮಂಗಳೂರು: 80 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದ ಸಾವು
ಮಂಗಳೂರು: ಕೋವಿಡ್-19 ಸೋಂಕು ಕಾರಣದಿಂದ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ.ಇದರಿಂದ ದ. ಕ.ದಲ್ಲಿ ಕೊರೋನಾ ಸೋಂಕಿನಿಂದ ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಸತತ ಸಾವಿನಿಂದ ಜಿಲ್ಲೆಯಲ್ಲಿ ಆತಂಕ ಹೆಚ್ಚಿದೆ.
ಇಂದು ಮಂಗಳೂರು ಕುಲಶೇಖರ ನಿವಾಸಿ 80 ವರ್ಷದ ಮಹಿಳೆಯು ಸಾವನ್ನಪ್ಪಿದ್ದಾರೆ.
ಈ ವೃದ್ಧೆ ಕೂಡಾ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಈಕೆ ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವ ವಾಯು ಸಮಸ್ಯಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ರಾಜ್ಯದ ಸಾವಿನ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಗುರುವಾರ 78 ಸಾವಿರದ ಗಡಿ ದಾಟಿದೆ. ಮುಂಬೈ, ಚೆನ್ನೈ, ಅಹಮದಾಬಾದ್ ಮತ್ತು ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕೇಂದ್ರ ಸರ್ಕಾರ ನಿನ್ನೆ ಉದ್ಯಮ ವಲಯಕ್ಕೆ ಈ ಬಿಕ್ಕಟ್ಟಿನ ಸಮಯದಲ್ಲಿ ಹೆಚ್ಚುವರಿ ಹಣದ ಹರಿವು ಮತ್ತು ಪ್ರೋತ್ಸಾಹ ಕ್ರಮವಾಗಿ 6 ಲಕ್ಷ ಕೋಟಿ ರೂಪಾಯಿಯನ್ನು ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
ಭಾರತದಲ್ಲಿ ಕೊರೋನಾಗೆ ಇದುವರೆಗೆ ಸಾವಿನ ಸಂಖ್ಯೆ 2,500ರ ಗಡಿ ದಾಟಿದ್ದು 2,549 ಮಂದಿ ಮೃತಪಟ್ಟಿದ್ದಾರೆ. 26,235 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 134 ಮಂದಿ ಮೃತಪಟ್ಟಿದ್ದು 3,722 ಹೊಸ ಕೇಸುಗಳು ಪತ್ತೆಯಾಗಿವೆ. ಇತ್ತೀಚಿನ ದಿನಗಳಲ್ಲಿ ವಲಸೆ ಕಾರ್ಮಿಕರ ಪ್ರಯಾಣ ಕೊರೋನಾ ವೈರಸ್ ಮತ್ತಷ್ಟು ಹಬ್ಬಲು ಕಾರಣವಾಗಬಹುದು ಎಂಬ ಆತಂಕ ಸೃಷ್ಟಿಸಿದೆ.
ವಿದೇಶಗಳಿಂದ ಭಾರತಕ್ಕೆ ಬಂದ ಕೆಲವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೇರಳದಲ್ಲಿ ಕೆಲವು ಜನರಲ್ಲಿ ಸೋಂಕು ವರದಿಯಾಗಿದೆ.