ಪತ್ರಕರ್ತ ಮಹಮ್ಮದ್ ಆರಿಫ್‌ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರು ಆಯ್ಕೆಯಾಗಿದ್ದಾರೆ.

ವಿಜಯ ಕರ್ನಾಟಕದಲ್ಲಿ ೨೦೧೮, ಎಪ್ರಿಲ್ 9ರಂದು ಪ್ರಕಟಗೊಂಡ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ,ವಸಂತ ಕುಮಾರ್ ಪೆರ್ಲ ಮತ್ತು ಬೆಸೆಂಟ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ನಡೆಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಪುರಸ್ಕೃತ ಸುಕೇಶ್ ಕುಮಾರ್ ದತ್ತಿನಿಧಿಯಿಂದ ‘ಬ್ರಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತಿದೆ.

ಜುಲೈ೧ ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!