ತಾಯಿ, ಮಗನಿಗೆ ಕೊರೊನ ಪಾಸಿಟಿವ್: ದೇಶಾದ್ಯಂತ 48 ಮಂದಿಯ ಸಾವು

ಮಂಗಳೂರು: ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವ ಶಕ್ತಿನಗರದ 80 ವರ್ಷದ ಮಹಿಳೆ ಹಾಗೂ ಅವರ 45 ವರ್ಷದ ಮಗ ನಿಗೆ ಕೊರೊನ ಪಾಸಿಟಿವ್ ದೃಢಗೊಂಡಿದ್ದು ಶಕ್ತಿನಗರದ ಅವರ ಮನೆಯ ಸುತ್ತ ಮುತ್ತ ಸೀಲ್ ಡೌನ್  ಮಾಡಲಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ರೋಗಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೆ ಏರಿದ್ದು, ಸಾವಿನ ಸಂಖ್ಯೆ 20ಕ್ಕೆ ತಲುಪಿದೆ.

ಇಂದು ರಾಜ್ಯದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರಿನಲ್ಲಿ 1, ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ವಿಜಯಪುರದಲ್ಲಿ 2 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ. 

ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,396 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ 27,982ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 48 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ  ಹೀಗಾಗಿ ಕೊರೋನಾಗೆ ಬಲಿಯಾದವರ ಸಂಖ್ಯೆ 872 ಕ್ಕೇರಿದೆ ಎಂದು ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ತಿಳಿಸಿದೆ.

ಇನ್ನು, ದೆಹಲಿಯ ಆಸ್ಪತ್ರೆಗಳಲ್ಲೇ ಕೊರೋನಾ ಸೋಂಕಿನ ಅಬ್ಬರ ಜೋರಾಗಿದೆ. ನಿನ್ನೆ ಒಂದೇ ದಿನ ಆರೋಗ್ಯ ಸೇವೆಯ 51 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯ ರೋಹಿಣಿಯ ಅಂಬೇಡ್ಕರ್ ಆಸ್ಪತ್ರೆಯಲ್ಲಿ 32 ಜನ, ಜಗಜೀವನರಾಮ್ ಆಸ್ಪತ್ರೆಯಲ್ಲಿ 19 ನರ್ಸ್​​ಗಳು, ಎಮ್ಸ್ ಆಸ್ಪತ್ರೆಯ ನರ್ಸ್ ಮತ್ತು ಅವರ ಇಬ್ಬರು ಮಕ್ಕಳಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಇನ್ನು, ಅಂಬೇಡ್ಕರ್ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತ ಗರ್ಭಿಣಿ ಮೃತಪಟ್ಟಿದ್ದಾರೆ.

ಒಂದು ತಿಂಗಳ ಕಾಲ ದೇಶವನ್ನೇ ಲಾಕ್​ಡೌನ್​ ಮಾಡಿದ ಹೊರತಾಗಿಯೂ ಕೊರೋನಾ ವೈರಸ್​ ನಿಯಂತ್ರಣಕ್ಕೆ ಬರುತ್ತಿಲ್ಲ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.

Leave a Reply

Your email address will not be published. Required fields are marked *

error: Content is protected !!