ಮಂಗಳೂರು: ನಾಲ್ವರಿಗೆ ಕೋವಿಡ್-19 ಸೋಂಕು ದೃಢ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾರ್ಚ್ 23 ಮತ್ತು 24ರಂದು ಮಂಗಳೂರಿನಲ್ಲಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಪ್ರಕಟಿಸಿದ್ಧಾರೆ.ಸೋಂಕಿತರು ಕೇರಳ ರಾಜ್ಯದವರಾಗಿದ್ದಾರೆ.
ಮಾರ್ಚ್ 19ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ಮತ್ತು ಮಾರ್ಚ್ 20ರಂದು ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಆದೇಶಿಸಿದ್ದಾರೆ.