ಮಂಗಳೂರು ಗೋಲಿಬಾರ್ ನ್ಯಾಯಾಂಗ ತನಿಖೆಗೆ : ರೈ ಆಗ್ರಹ
ಮಂಗಳೂರು: ಮಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆಯ ಬಳಿಕ ಉಂಟಾದ ಹಿಂಸಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು ನೀಡಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದ್ದು, ಈ ಘಟನೆಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಒತ್ತಾಯಿಸಿದ್ದಾರೆ. ಅದಿತ್ಯವಾರ ಮಂಗಳೂರಿನ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗಲಭೆಗೆ ಮುಖ್ಯ ಕಾರಣ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಎಂದು ಆರೋಪಿಸಿದರು.
ಶಾಂತಿಯಾಗಿದ್ದ ಮಂಗಳೂರಿನಲ್ಲಿ ಉದ್ದೇಶ ಪೂರ್ವಕವಾಗಿ ಗಲಭೆ ಸೃಷ್ಟಿಸುವ ದೃಷ್ಠಿಯಿಂದ ಐಪಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಹಾಕಿದ್ದರು ಎಂದ ಅವರು ಈ ಘಟನೆಯ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯಾಗಬೇಕು. ಆಗ ತಪ್ಪಿತಸ್ಥರು ಯಾರು ಎಂಬುದು ತಿಳಿಯುತ್ತದೆ ಎಂದು ಅವರು ಹೇಳಿದರು.
ಪ್ರತಿಭಟನೆ ಅಥವಾ ಘಟನೆಯಲ್ಲಿ ಇಲ್ಲದ ಕಾಂಗ್ರೆಸ್ ಮೇಲೆ ಸುಮ್ಮನೆ ವೃಥಾ ಆರೋಪ ಹೊರಿಸಿ ಗೂಬೆ ಕೂರಿಸುವ ಕೆಲಸವಾಗುತ್ತಿದೆ, ಕಾಂಗ್ರೆಸ್ ಮೇಲೆ ಸುಮ್ಮನೆ ಆರೋಪ ಮಾಡುವ ಬಿಜೆಪಿಯಿಂದಲೇ ಈ ಗಲಾಟೆ ನಡೆದಿದ್ದು , ಪ್ರಕರಣವನ್ನು ತಿರುಚಲು ಕಾಂಗ್ರೇಸ್ ಮೇಲೆ ಆರೋಪ ಮಾಡುತ್ತಿದೆ ಎಂದು ಅವರು ಹೇಳಿದರು.
ಗೋಲಿಬಾರ್ನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದು ಸರ್ಕಾರದ ಕೃಪೆಯಿಂದ ನಡೆದ ಹತ್ಯೆ. ಸಂತ್ರಸ್ತ ಕುಟುಂಬವನ್ನು ಸಂತೈಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಂಗಳೂರಿಗೆ ಬರಲು ತಡೆಗಟ್ಟಿದ್ದಾರೆ. ಇದು ಪ್ರಜಾಪ್ರಭುತ್ವದ ಸರಿಯಾದ ಕ್ರಮವಲ್ಲ. ವಿಪಕ್ಷ ನಾಯಕರು ಬರುವುದು ಜನರಿಗೆ ಸಾಂತ್ವನ ಹೇಳಲು ಅವರಿಗೂ ಜವಾಬ್ದಾರಿ ಇದೆ ಎಂದರು.ಕಾಂಗ್ರೆಸ್ ಎಲ್ಲಿಯೂ ಪ್ರಚೋದನಕಾರಿ ಭಾಷಣ ಮಾಡಿಲ್ಲ. ತಮ್ಮ ಸರ್ಕಾರದ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದ್ದು, ಈ ಹಿಂದಿನ ಘಟನಾವಳಿಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದು ಯಾರು ಎಂಬುದು ಜನರಿಗೆ ಗೊತ್ತಿದೆ ಎಂದು ಟೀಕಿಸಿದರು. ಎಂಎಲ್ ಸಿಿ ಹರೀಶ್ ಕುಮಾರ್ ,ಜಿ.ಎ.ಬಾವ ಮೊದಲಾದವರಿದ್ದರುು.