ಮಂಗಳೂರು: ವಿಮಾನ ನಿಲ್ದಾಣದಲ್ಲಿಯೇ ಕಾಂಗ್ರೆಸ್ ನಾಯಕರ ವಶಕ್ಕೆ ಪಡೆದ ಪೊಲೀಸ್


ಮಂಗಳೂರು: ಜಿಲ್ಲೆಯಲ್ಲಿ ನಡೆದ ಗೋಲಿಬಾರಿನಲ್ಲಿ ಮೃತಪಟ್ಟವರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ ಕೊಡಲು ಬಂದ ನಾಯಕರನ್ನು ಪೊಲೀಸರು ಬಜ್ಪೆ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆದಿದ್ದಾರೆ.

ಮಾಜಿ ಸ್ಪೀಕರ್,ಶಾಸಕ ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ವಿ.ಎಸ್. ಉಗ್ರಪ್ಪ, ಎಂ.ಬಿ,ಪಾಟೀಲ್, ಮಾಜಿ ಸಚಿವ ಸೀತಾರಾಮ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಕೆಲ ಹೊತ್ತು ಹೈಡ್ರಾಮಾವೇ ನಡೆಯಿತು.


ಕಾಂಗ್ರೆಸ್ ನಿಯೋಗ ಇಂದು ಪೊಲೀಸ್ ಗೋಲಿಬಾರಿನಲ್ಲಿ ಮೃತಪಟ್ಟ ಇಬ್ಬರ ಮನೆಗೆ ಭೇಟಿ ಕೊಡಲು ಹಾಗೂ ಆಸ್ಪತ್ರೆಯಲ್ಲಿ ಇರುವವರಿಗೆ ಸಾಂತ್ವನ ಹೇಳಲು ಮಂಗಳೂರಿಗೆ ಆಗಮಿಸಿತ್ತು. ಅವರನ್ನು ಪೊಲೀಸರು ವಿಮಾನ ನಿಲ್ದಾಣದಿಂದಲೇ ಬೆಂಗಳೂರಿಗೆ ವಾಪಸ್ ಕಳುಹಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡರು ವಾಪಸ್ ಹೋಗಲು ನಿರಾಕರಿಸಿದ್ದಾರೆ. ಆಗ ಪೊಲೀಸರು ನಿಮ್ಮನ್ನು ವಶಕ್ಕೆ ಪಡೆಯುತ್ತೇವೆ ಎಂದು ಹೇಳಿದ್ದರು. ಈ ವೇಳೆ ರಮೇಶ್ ಕುಮಾರ್ ಪೊಲೀಸರ ಕ್ರಮವನ್ನು ವಿರೋಧಿಸಿದರು. ನಾವು ಕಾನೂನುಬಾಹಿರ ಕೆಲಸವನ್ನು ಮಾಡಲು ಬಂದಿಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇವೆ. ನೀವು ನಮ್ಮನ್ನು ಬಂಧಿಸಬಾರದು ಎಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಪೊಲೀಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಎಳೆದಾಟ,ತಳ್ಳಾಟ ಪಾರಂಭವಾಯಿತು. ಕೊನೆಗೆ ಪೊಲೀಸರು ಮುಖಂಡರೆಲ್ಲರನ್ನು ತಮ್ಮ ಜೀಪ್‌ನಲ್ಲಿ ಕರೆದುಕೊಂಡು ಸ್ಥಳೀಯ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!