ಮಂಗಳೂರು: ಸೌದಿ, ಕುವೈತ್, ಕತಾರ್ ವಿಮಾನಯಾನ ರದ್ದು
ಮಂಗಳೂರು: ಕರ್ನಾಟಕದಲ್ಲೂ ಶಂಕಿತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುವ ಹೆಚ್ಚಿನ ವಿಮಾನಯಾನ ಸೇವೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಮಾತನಾಡಿದ ಏರ್ ಇಂಡಿಯಾದ ಮಂಗಳೂರು ವಿಭಾಗದ ಅಧಿಕಾರಿ ಕೇಂದ್ರ ಸರಕಾರದ ಸೂಚನೆಯ ಮೇರೆಗೆ ಹಲವು ವಿಮಾನ ಯಾನ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಸೌದಿ ಅರೇಬಿಯಾ, ಕುವೈತ್, ಕತಾರ್‌ಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನಯಾನ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದ್ದಾರೆ.
ಸದ್ಯಕ್ಕೆ ದುಬೈ, ಅಬುಧಾಬಿ, ಮಸ್ಕತ್‌ಗೆ ಏರ್ ಇಂಡಿಯಾ ಸಂಸ್ಥೆಯ ವಿಮಾನ ಸೇವೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.