ಮಂಗಳೂರು: ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ 
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿರ್ದೇಶಕರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಆಯ್ಕೆಗೊಂಡಿದ್ದು, ಅವರನ್ನು ಬ್ಯಾಂಕಿನ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಸೋಮವಾರ ಸನ್ಮಾನಿಸಲಾಯಿತು.


ಬಜಪೆ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಗೊಂಡ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಬೆಳಪು ಸಹಕಾರಿ ಸಂಘದ ಅಧ್ಯಕ್ಷರಾಗಿರುವ ದೇವಿಪ್ರಸಾದ್ ಶೆಟ್ಟಿ, ಅಮ್ಮೆ೦ಬಳ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಟಿ ಜಿ ರಾಜಾರಾಮ ಭಟ್, ತಣ್ಣೀರು ಪಂಥ ಸಂಘದ ಅಧ್ಯಕ್ಷ ಬಿ ನಿರಂಜನ್, ಮಂಗಳೂರು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಮುಂಡ್ಕೂರು ಸಹಕಾರಿ ಸಂಘದ ಅಧ್ಯಕ್ಷ ಎಂ ವಾದಿರಾಜ ಶೆಟ್ಟಿ, ಮೊಳಹಳ್ಳಿ ಸಂಘದ ಅಧ್ಯಕ್ಷರಾದ ಮಹೇಶ್ ಹೆಗ್ಡೆ, ಮರವಂತೆ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ,

ಇನ್ನಂಜೆ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ರಾವ್, ಬಜಪೆ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಮೋನಪ್ಪ ಶೆಟ್ಟಿ, ಕಾವೂರು ಸಹಕಾರಿ ಸಂಘದ ಅಧ್ಯಕ್ಷ ಹರೀಶ್ಚಂದ್ರ, ಯೆನೆಕಲ್ಲು ಸಹಕಾರಿ ಸಂಘದ ನಿರ್ದೇಶಕರಾಗಿ ಆಯ್ಕೆಗೊಂಡ ಕೆಎಸ್ ದೇವರಾಜ್, ರಾಮಕೃಷ್ಣ ಸೊಸೈಟಿಯ ನಿರ್ದೇಶಕ ಜೈರಾಜ್ ರೈ ಅವರನ್ನು ಸೊಸೈಟಿಯ ಪರವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್, ಎಸ್ ಬಿ ಜಯರಾಮ ರೈ, ಅಶೋಕ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ, ಸಿಇಒ ರವೀಂದ್ರ ಬಿ, ಮಹಾಪ್ರಬಂಧಕ ಗೋಪಿನಾಥ್ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!