ಮಂಗಳೂರು- ಗೋಲಿಬಾರ್ ಗೆ ಇಬ್ಬರು ಬಲಿ ಉದ್ವಿಗ್ನ ಸ್ಥಿತಿ
ಮಂಗಳೂರು – ರಾಜ್ಯಾದ್ಯಾಂತ ಇಂದು ನಿಷೇಧಾಜ್ಞೆ ಜಾರಿಗೊಳಿಸಿದ್ದರೂ, ಮಂಗಳೂರಿನಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು ಗೋಲಿಬಾರ್ ನಡೆದಿದೆ. ಬಂದರು ಸಮೀಪ ನಡೆದ ಹಿಂಸಾಚಾರ ಹತ್ತಿಕ್ಕುವ ಭರದಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದು, ಗುಂಡು ತಗುಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಕಣ್ಣಿಗೆ ಗುಂಡೇಟು ಬಿದ್ದಿದ್ದರೆ, ಇನ್ನೊಬ್ಬರ ಬೆನ್ನಿನ ಭಾಗಕ್ಕೆ ಗುಂಡು ಬಿದ್ದಿದ್ದು ನಗರದಲ್ಲಿ ಶುಕ್ರವಾರ ಮಧ್ಯರಾತ್ರಿಯವರೆಗೆ ಕಫ್ರ್ಯೂ ಜಾರಿ ಮಾಡಿದ್ದಾರೆ.
ಗೋಲಿಬಾರ್ ಬಗ್ಗೆ ಪೊಲೀಸ್ ಆಯುಕ್ತರ ಸ್ಪಷ್ಟನೆ
ಗುಂಡು ಹಾರಿಸಿದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಪಿಎಸ್ ಹರ್ಷ ಕೂಡ ಸ್ಪಷ್ಟನೆ ನೀಡಿದ್ದು, ಉದ್ರಿಕ್ತರು ಮಾರಕಾಸ್ತ್ರ ಹಿಡಿದು ಪೊಲೀಸರ ಮೇಲೆ ಯತ್ನಿಸಿದರು. ಇದರಿಂದಾಗಿ ಕೆಲ ಪೊಲೀಸರು ಹಾಗೂ ಸಾರ್ವಜನಿಕರು ಗಂಭೀರವಾಗಿ ಗಾಯಗೊಂಡಿದ್ದು ಪ್ರತಿಭಟನಾಕಾರರ ಪ್ರತಿಭಟನೆ ಹಿಂಸಾ ರೂಪಕ್ಕೆ ಪರಿವರ್ತನೆ ಗೊಂಡ ಪರಿಣಾಮ ಅನಿವಾರ್ಯವಾಗಿ ಗುಂಡು ಹಾರಿಸಬೇಕಾಯಿತು ಎಂದು ತಿಳಿಸಿದರು