ಮಣಿಪಾಲ: ಕೊರೋನಾ ಪಾಸಿಟಿವ್ ವ್ಯಕ್ತಿಯ ಸಾವು

ಮಣಿಪಾಲ: ಮುಂಬೈಯಿಂದ ಕುಂದಾಪುರದ ಜಪ್ತಿಗೆ ಬಂದಿದ್ದ 54 ವರ್ಷದ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆ ದಾಖಲಾಗಿದ್ದವರು ಗುರುವಾರ ಮೃತಪಟ್ಟಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಇದೆ ಎಂದು ಇದೀಗ ವೈದ್ಯಕೀಯಾ ವರದಿಯಲ್ಲಿ ತಿಳಿದು ಬಂದಿದೆ.

ಮೇ 13 ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಸೂಕ್ತ ಚಿಕಿತ್ಸೆ ಇಲ್ಲದ ಕಾರಣ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 14 ರಂದು ಎದೆ ನೋವು ಹೆಚ್ಚಾಗುತ್ತಿದ್ದಂತೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಮುಂಬೈಯಿಂದ ಬಂದ ಕಾರಣ ವ್ಯಕ್ತಿಗೆ ಪ್ರತ್ಯೇಕ ಚಿಕಿತ್ಸೆ ನೀಡಲಾಗಿತ್ತು.


ಈ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ದಿನದಿಂದ ಆಸ್ಪತ್ರೆಯಲ್ಲಿ ಕಾರ್ಯವಿರ್ವಹಿಸುತ್ತಿದ್ದ ವೈದ್ಯರನ್ನು, ನರ್ಸ್, ಸ್ವಚ್ಚತಾ ಸಿಬ್ಬಂದಿಗಳನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

1 thought on “ಮಣಿಪಾಲ: ಕೊರೋನಾ ಪಾಸಿಟಿವ್ ವ್ಯಕ್ತಿಯ ಸಾವು

  1. Please keep away from public if it is not too necessary….stay at home.. continue d lockdown…

Leave a Reply

Your email address will not be published. Required fields are marked *

error: Content is protected !!