ಕೆಎಂಸಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿಲ್ಲ
ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಡುತ್ತಿದೆ. ಇದು ಸುಳ್ಳು ಸುದ್ದಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟನೆ ನೀಡಿದ್ದಾರೆ.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ ಯಾವುದೇ ರೋಗಿಯಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.