ಮಣಿಪಾಲ ಕೊರೋನಾ ವೈರಸ್ ಶಂಕೆ: ಮೂವರು ವಿದ್ಯಾರ್ಥಿಗಳು ಕೆಎಂಸಿಗೆ ದಾಖಲು

ಮಣಿಪಾಲ: ಮಣಿಪಾಲ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಶಂಕಿತ ಕೊರೋನಾ ಹರಡಿರುವ ಶಂಕೆ. ವಿದ್ಯಾರ್ಥಿಗಳು ಇತ್ತೀಚೆಗೆ ಅಮೇರಿಕಾ, ಕುವೈಟ್ ಮಲೇಷ್ಯಾದಿಂದ ಬಂದಿದ್ದು, ಕೊರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ. ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!